Virat Kohli: ಸಚಿನ್ ದಾಖಲೆ ಮುರಿದ ವಿರಾಟ್, ವಿಶ್ವ ಕ್ರಿಕೆಟ್‌ನಲ್ಲಿ ಕಿಂಗ್ ಕೊಹ್ಲಿ ಹೊಸ ಸಾಧನೆ
Virat Kohli: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ತವರು ನೆಲದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಈ ಅಮೋಘ ಸಾಧನೆ ಮಾಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ದೆಹಲಿ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ 25 ಸಾವಿರ ರನ್ ಪೂರೈಸಿದರು.
2/ 8
ಅವರು 549 ಅಂತರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ಬರೆದಿದ್ದಾರೆ. ಇದು ಅತ್ಯಂತ ವೇಗದ 25 ಸಾವಿರ ರನ್ ಆಗಿದೆ. ಇದಕ್ಕೂ ಮುನ್ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 577 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.
3/ 8
34 ವರ್ಷದ ಬಲಗೈ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಎರಡನೇ ಇನ್ನಿಂಗ್ಸ್‌ನ 12ನೇ ಓವರ್‌ನ ಮೊದಲ ಎಸೆತದಲ್ಲಿ ನಾಥನ್ ಲಿಯಾನ್ ಅವರ ಎಸೆತವನ್ನು ಬೌಂಡರಿ ಬಾರಿಸುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,000 ರನ್‌ಗಳ ಸಂಖ್ಯೆಯನ್ನು ಪೂರ್ಣಗೊಳಿಸಿದರು.
4/ 8
ಈ ಮೂಲಕ ಸಚಿನ್ ತೆಂಡೂಲ್ಕರ್ ನಂತರ ಈ ಸ್ಥಾನ ಗಳಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ 664 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 34357 ರನ್ ಗಳಿಸಿದ್ದಾರೆ.
5/ 8
25,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಕೊಹ್ಲಿ. ಈ ಹಿಂದೆ ಸಚಿನ್, ಕುಮಾರ ಸಂಗಕ್ಕಾರ, ರಿಕಿ ಪಾಂಟಿಂಗ್, ಮಹೇಲಾ ಜಯವರ್ಧನೆ ಮತ್ತು ಜಾಕ್ವೆಸ್ ಕಾಲಿಸ್ ಈ ಸಾಧನೆ ಮಾಡಿದ್ದಾರೆ.
6/ 8
ವಿರಾಟ್ ಕೊಹ್ಲಿ ಈ ದಿನ ಅಂದರೆ 19 ಫೆಬ್ರವರಿ 2011ರಂದು ಮೊದಲ ಏಕದಿನ ವಿಶ್ವಕಪ್ ಆಡಿದರು. ನಂತರ ಬಾಂಗ್ಲಾದೇಶ ವಿರುದ್ಧ ಢಾಕಾದಲ್ಲಿ ಶತಕ ಬಾರಿಸಿದ್ದರು. ಕೊಹ್ಲಿ ವೀರೇಂದ್ರ ಸೆಹ್ವಾಗ್ ಜೊತೆ 203 ರನ್ ಜೊತೆಯಾಟವನ್ನು ಹಂಚಿಕೊಂಡಿದ್ದರು.
7/ 8
ದೆಹಲಿ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 20 ರನ್ ಗಳಿಸಿ ಔಟಾದರು. ಟಾಡ್ ಮರ್ಫಿ ಎಸೆತದಲ್ಲಿ ವಿಕೆಟ್‌ಕೀಪರ್ ಅಲೆಕ್ಸ್ ಕ್ಯಾರಿ ಅವರು ಸ್ಟಂಪ್ ಮಾಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ವಿವಾದಾತ್ಮಕವಾಗಿ ಎಲ್‌ಬಿಡಬ್ಲ್ಯೂ ಆಗಿ ಔಟಾಗಿದ್ದರು.
8/ 8
ಇದು ವಿರಾಟ್ ಕೊಹ್ಲಿಯ ತವರು ಮೈದಾನ. ಅವರು ಹಲವು ವರ್ಷಗಳಿಂದ ಫಿರೋಜ್‌ಶಾ ಕೋಟ್ಲಾ ಮೈದಾನದಲ್ಲಿ ತಮ್ಮ ಆಟವನ್ನು ಆಡುತ್ತಿದ್ದಾರೆ. ತವರು ನೆಲದಲ್ಲಿ ಸ್ಥಳೀಯ ಹುಡುಗನಿಂದ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯದಲ್ಲಿಯೂ ಕೊಹ್ಲಿ ಅಷ್ಟಾಗಿ ಅಬ್ಬರಿಸಲಿಲ್ಲ.
First published:
18