ಈ ವರ್ಷ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ನಲ್ಲಿ ಆರಂಭಿಕರಾಗಿ ಬಂದ ಪೂಜಾರ 66 ರನ್ ಗಳಿಸಿದರೆ, ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ನಲ್ಲಿ 50 ರನ್ ಗಳಿಸಿದರು. ಆದರೆ ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ನಲ್ಲಿ ಶತಕ ಸಿಡಿಸಿದ ಗಿಲ್ ಈ ವರ್ಷ ಶತಕ ಸಿಡಿಸಿದ ಭಾರತದ ಮೊದಲ ಆರಂಭಿಕ ಆಟಗಾರ ಎಂಬ ಅಪರೂಪದ ಸಾಧನೆ ಮಾಡಿದರು.