ಗಿಲ್ ನ್ಯೂಜಿಲೆಂಡ್ ವಿರುದ್ಧ 149 ಎಸೆತಗಳಲ್ಲಿ 208 ರನ್ ಗಳಿಸಿದರು. 19 ಬೌಂಡರಿ ಮತ್ತು 9 ಸಿಕ್ಸರ್ಗಳನ್ನು ಬಾರಿಸಿದರು. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ 5ನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಈ ಹಿಂದೆ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಈ ಸಾಧನೆ ಮಾಡಿದ್ದಾರೆ. ರೋಹಿತ್ 3 ಬಾರಿ ಈ ಸಾಧನೆ ಮಾಡಿದ್ದಾರೆ.