ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ಅಹಮದಾಬಾದ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಕೆಲವು ಬದಲಾವಣೆ ಮಾಡುವ ಸಾಧ್ಯತೆ ಇದೆ. ಇದಾದ ನಂತರ ಮುಂದಿನ ಆರು-ಏಳು ತಿಂಗಳುಗಳಲ್ಲಿ ಭಾರತ ಟಿ20 ಮಾದರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿಲ್ಲ. ಹೀಗಿರುವಾಗ ಭಾರತ ಆಡುವ ಇಲೆವೆನ್‌ನಲ್ಲಿ ಪಾಂಡ್ಯ ಪೃಥ್ವಿ ಶಾ ಅವರಿಗೆ ಅವಕಾಶ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.