ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ ಸತತ ಎರಡು ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಭಾರತ 12 ರನ್ಗಳ ರೋಚಕ ಜಯ ಸಾಧಿಸಿತ್ತು. 2ನೇ ODI 8 ವಿಕೆಟ್ಗಳ ಬೃಹತ್ ಜಯ ದಾಖಲಿಸಲಿದೆ.
2/ 8
ಭರ್ಜರಿ ಬೌಲಿಂಗ್ ಆಧಾರದ ಮೇಲೆ ಭಾರತ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ಕೇವಲ 108 ರನ್ಗಳಿಗೆ ನ್ಯೂಜಿಲೆಂಡ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಗ್ಲೆನ್ ಫಿಲಿಪ್ಸ್ ಗರಿಷ್ಠ 36 ರನ್ ಗಳಿಸಿದರೆ, ಮಿಚೆಲ್ ಸ್ಯಾಂಟ್ನರ್ 27 ರನ್ ಗಳಿಸಿದರು. ಕಳೆದ ಪಂದ್ಯದ ಹೀರೋ ಮೈಕಲ್ ಬ್ರೇಸ್ಬೆಸ್ ಕೇವಲ 22 ರನ್ ಗಳಿಸಲಷ್ಟೇ ಶಕ್ತರಾದರು.
3/ 8
ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲಿಂಗ್ ಅಮೋಘವಾಗಿತ್ತು. ಮೊಹಮ್ಮದ್ ಶಮಿ 3, ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ 2-2 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.
4/ 8
ನ್ಯೂಜಿಲೆಂಡ್ ಅನ್ನು ಕ್ಲೀನ್ ಸ್ವೀಪ್ ಮಾಡುವ ಅವಕಾಶ ಭಾರತಕ್ಕಿದೆ. ಒಂದು ವೇಳೆ ಟೀಂ ಇಂಡಿಯಾ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡರೆ 113 ಅಂಕಗಳೊಂದಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನಕ್ಕೆ ತಲುಪಲಿದೆ. ನ್ಯೂಜಿಲೆಂಡ್ ವಿರುದ್ಧ ಭಾರತದ ಗೆಲುವಿನಿಂದ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.
5/ 8
ಏಕದಿನ ಸರಣಿಯಲ್ಲಿ ಭಾರತ 2-0 ಅಂತರದ ಜಯ ಸಾಧಿಸಿದ ಬಳಿಕ ಆಸ್ಟ್ರೇಲಿಯಾ ತಂಡ ಏಕದಿನ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಮೊದಲ ಎರಡು ಪಂದ್ಯಗಳನ್ನು ಗೆದ್ದ ನಂತರ ಭಾರತ 112 ಅಂಕಗಳನ್ನು ಹೊಂದಿದ್ದರೆ, ಆಸ್ಟ್ರೇಲಿಯಾ 112 ಅಂಕ ಹೊಂದಿದೆ.
6/ 8
ನ್ಯೂಜಿಲೆಂಡ್ ತಂಡ ಏಕದಿನ ಸರಣಿಯನ್ನು ಆರಂಭಿಸಿದಾಗ ಮೊದಲ ಸ್ಥಾನವನ್ನು ಆಕ್ರಮಿಸಿಕೊಂಡಿತ್ತು, ಆದರೆ ಸತತ ಎರಡನೇ ಸೋಲಿನ ನಂತರ ಕಿವೀಸ್ 117 ರಿಂದ 115 ಅಂಕಗಳಿಗೆ ಇಳಿದಿದೆ. ಈ ಮೂಲಕ ಕಿವೀಸ್ 2ನೇ ಸ್ಥಾನಕ್ಕೆ ಕುಸಿದಿದೆ.
7/ 8
ಇದರಿಂದಾಗಿ ಇಂಗ್ಲೆಂಡ್ ತಂಡ 113 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ತಲುಪಿದರೆ, 113 ಅಂಕಗಳೊಂದಿಗೆ ನ್ಯೂಜಿಲ್ಯಾಂಡ್ 2ನೇ ಸ್ತಾನಕ್ಕೆ ಕುಸಿದಿದೆ. ಬಳಿಕ ಭಾರತ ಇಂದಿನ ಗೆಲುವಿನೊಂದಿಗೆ 113 ಅಂಕಗಳಿಸಿ 4ರಿಂದ 3ನೇ ಸ್ಥಾನಕ್ಕೆ ಏರಿಕೆ ಕಂಡಿದೆ.
8/ 8
ಇನ್ನು, 3ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಇದೀಗ 112 ಅಂಕಗಳೊಂದಿಗೆ 4ನೇ ಸ್ಥಾನಕ್ಕೆ ಕುಸಿದಿದೆ. ಬಳಿಕ 5ನೇ ಸ್ಥಾನದಲ್ಲಿ ಪಾಕಿಸ್ತಾನ ತಂಡವಿದ್ದು, 6ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾವಿದೆ.