IND vs NZ: ನ್ಯೂಜಿಲ್ಯಾಂಡ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಕಹಿ ಸುದ್ದಿ, ನಾಳೆ ಪಂದ್ಯ ನಡೆಯುವುದೇ ಡೌಟ್
IND vs NZ: ನಾಳಿನ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿಯಲ್ಲಿ ಜೀವಂತವಾಗಿ ಉಳಿಯಲಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕೈಚಲ್ಲುವ ಸಾಧ್ಯತೆ ಇದೆ. ಈ ಕ್ರಮದಲ್ಲಿ ಈ ಪಂದ್ಯ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಮೂರು ಏಕದಿನ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 306 ರನ್ಗಳ ಬೃಹತ್ ಗುರಿಯನ್ನೂ ಉಳಿಸಿಕೊಳ್ಳಲು ಸಾಧ್ಯವಾಗದೆ ಸೋಲೊಪ್ಪಿಕೊಂಡಿತ್ತು.
2/ 7
ಇದರೊಂದಿಗೆ ಎರಡನೇ ಏಕದಿನ ಪಂದ್ಯ ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿಯಲ್ಲಿ ಉಳಿದುಕೊಳ್ಳಲಿದೆ.
3/ 7
ಹ್ಯಾಮಿಲ್ಟನ್ ಮೈದಾನದಲ್ಲಿ ಭಾನುವಾರ ಉಭಯ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಆದರೆ, ಪಂದ್ಯದ ದಿನವಾದ ಭಾನುವಾರ ಹ್ಯಾಮಿಲ್ಟನ್ ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
4/ 7
ಹ್ಯಾಮಿಲ್ಟನ್ ನಲ್ಲಿ ಶೇ.91ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಪಂದ್ಯದ ನಿರ್ವಹಣೆಯ ಮೇಲೆ ಕರಿನೆರಳು ಬಿದ್ದಿದೆ. ಇದೇ ವೇಳೆ ಪಂದ್ಯ ರದ್ದಾಗುವ ಸಾಧ್ಯತೆ ಹೆಚ್ಚಿದೆ. ಈ ಸುದ್ದಿ ಟೀಂ ಇಂಡಿಯಾ ಪಾಲಿಗೆ ನಿಜಕ್ಕೂ ಕೆಟ್ಟ ಸುದ್ದಿ ಎನ್ನಬಹುದು.
5/ 7
ಹೇಗಾದರೂ ಮಾಡಿ ಎರಡನೇ ಪಂದ್ಯ ಗೆದ್ದು ಸರಣಿ ಸಮಬಲ ಮಾಡಿಕೊಳ್ಳಬೇಕು ಎಂಬ ಆಸೆಯಲ್ಲಿರುವ ಟೀಂ ಇಂಡಿಯಾದ ಆಸೆಗೆ ವರುಣ ನೀರೆರಚುವ ಸಾಧ್ಯತೆ ಇದೆ. ಈಗಾಗಲೇ ಟಿ20 ಸರಣಿಯ ಎರಡು ಪಂದ್ಯಗಳು ಮಳೆಯಿಂದ ಹಾನಿಗೀಡಾಗಿರುವುದು ಗೊತ್ತೇ ಇದೆ.
6/ 7
ಭಾನುವಾರದ ಏಕದಿನ ಪಂದ್ಯ ಸರಣಿಯ ಫಲಿತಾಂಶದ ಜತೆಗೆ ಐಸಿಸಿ ಏಕದಿನ ಸೂಪರ್ ಲೀಗ್ ಪಾಯಿಂಟ್ಸ್ ಮೇಲೂ ಪರಿಣಾಮ ಬೀರಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿ ರೇಸ್ನಲ್ಲಿ ಉಳಿಯಲಿದೆ.
7/ 7
ಸದ್ಯ ಭಾರತ 19 ಪಂದ್ಯಗಳಿಂದ 13 ಗೆಲುವು ಹಾಗೂ 6 ಸೋಲುಗಳೊಂದಿಗೆ 129 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಕಿವೀಸ್ 16 ಪಂದ್ಯಗಳಿಂದ 12 ಗೆಲುವು ಮತ್ತು 4 ಸೋಲುಗಳೊಂದಿಗೆ 120 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.