ಏಕದಿನ ಕ್ರಿಕೆಟ್ನಲ್ಲಿ ಸತತ ಎರಡನೇ ಪಂದ್ಯದಲ್ಲಿ ಶತಕ ಸಿಡಿಸಿದ ಶುಭಮನ್ ಗಿಲ್ ವಿಶೇಷ ದಾಖಲೆ ಮಾಡಿದ್ದಾರೆ. ಅವರು ಭಾರತದ ಪರ ಈ ಸ್ವರೂಪದಲ್ಲಿ ವೇಗವಾಗಿ 1000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾದರು. ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ 24-24 ODI ಇನ್ನಿಂಗ್ಸ್ಗಳನ್ನು ಆಡಿದ ನಂತರ ಈ ಸಾಧನೆ ಮಾಡಿದ್ದರು. ಆದರೆ ಗಿಲ್ ಕವಲ19 ನೇ ಇನ್ನಿಂಗ್ಸ್ನಲ್ಲಿ ಈ ದಾಖಲೆ ಮುರಿದಿದ್ದಾರೆ.
ಶುಭಮನ್ ಗಿಲ್ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತದ ಇಶಾನ್ ಕಿಶನ್ 24 ವರ್ಷ 145 ದಿನ ವಯಸ್ಸಿನ್ಲಲಿ ಇರುವಾಗ ಏಕದಿನದಲ್ಲಿ ದ್ವಿಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು. ಗಿಲ್ 23 ವರ್ಷದ132 ದಿನ ವಯಸ್ಸಿನಲ್ಲಿ ಇರುವಾಗ ODIನಲ್ಲಿ ದ್ವಿಶತಕ ಗಳಿಸಿದರು.
ಏಕದಿನ ಪಂದ್ಯಗಳಲ್ಲಿ ಅತಿ ಕಡಿಮೆ ಇನ್ನಿಂಗ್ಸ್ಗಳಲ್ಲಿ ದ್ವಿಶತಕ ಸಿಡಿಸಿದ ಬಲಗೈ ಬ್ಯಾಟ್ಸ್ಮನ್ ಎಂಬ ಕೀರ್ತಿಗೆ ಗಿಲ್ ಪಾತ್ರರಾಗಿದ್ದಾರೆ. ಕೇವಲ 19 ODI ಇನ್ನಿಂಗ್ಸ್ಗಳನ್ನು ಆಡಿದ ನಂತರ ಅವರು ಈ ವಿಶೇಷ ಸಾಧನೆ ಮಾಡಿದ್ದಾರೆ. ನಾವು ಅತ್ಯಂತ ಕಡಿಮೆ ಇನ್ನಿಂಗ್ಸ್ನ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇಶಾನ್ ಕಿಶನ್ ಕೇವಲ 9ನೇ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ್ದರು.
ಏಕದಿನ ಕ್ರಿಕೆಟ್ನ ಇತಿಹಾಸದಲ್ಲಿ, ಭಾರತದಿಂದ ಇದುವರೆಗೆ ನಾಲ್ಕು ಬ್ಯಾಟ್ಸ್ಮನ್ಗಳು ದ್ವಿಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ನಂತರ ಇದೀಗ ಗಿಲ್ ಹೆಸರು ಕೂಡ ಪಟ್ಟಿಗೆ ಸೇರ್ಪಡೆಯಾಗಿದೆ. ರೋಹಿತ್ ಶರ್ಮಾ ಏಕದಿನದಲ್ಲಿ ಅತಿ ಹೆಚ್ಚು ದ್ವಿಶತಕ ಬಾರಿಸಿದವರಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರು 3 ಬಾರಿ ಈ ಸಾಧನೆ ಮಾಡಿದ್ದಾರೆ.