ಈ ವಿಷಯವನ್ನು ಸ್ವತಃ ಸರ್ಕಾರವೇ ಖಚಿತಪಡಿಸಿದೆ. ಅಲ್ಲದೇ ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಶರ್ಮಾ ಕ್ರೀಡಾಂಗಣದ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ. ಜೊತೆಗೆ ಪಂದ್ಯದ ತಯಾರಿಗಳ ಕುರಿತಂತೆ ಅಸ್ಸಾಂ ಕ್ರಿಕೆಟ್ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಈ ಅರ್ಧ ದಿನದ ರಜೆ ಕೇವಲ ಬರ್ಸಾಪರಾ ಸ್ಟೇಡಿಯಂ ಇರುವ ಕಾಮ್ರೂಪ್ ಜಿಲ್ಲೆಗೆ ಮಾತ್ರ ಅನ್ವಯವಾಗುತ್ತದೆ. ಪಂದ್ಯದ ದಿನ ಮಧ್ಯಾಹ್ನ 1 ಗಂಟೆ ನಂತರ ಈ ರಜೆ ಆರಂಭವಾಗಲಿದೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ಸಿ), ಹಾರ್ದಿಕ್ ಪಾಂಡ್ಯ (ವಿಸಿ), ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಡಬ್ಲ್ಯುಕೆ), ಇಶಾನ್ ಕಿಶನ್ (ಡಬ್ಲ್ಯುಕೆ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.