ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದ ನಂತರ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾಗೆ ಪ್ರವೇಶಿಸುವುದು ಮತ್ತಷ್ಟು ವಿಳಂಬವಾಗಲಿದೆ. ಫೆಬ್ರವರಿ 9ರಿಂದ ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ನಲ್ಲಿ ಭಾಗವಹಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬುಮ್ರಾ, ಮತ್ತೊಂದು ಹಿನ್ನಡೆಯ ನಂತರ ತಮ್ಮ ಫಿಟ್ನೆಸ್ಗೆ ಹೊಂದಿಕೊಳ್ಳಲು ಇನ್ನೊಂದು ತಿಂಗಳು ಬೇಕಾಗಬಹುದು ಎಂದು ಹೇಳಲಾಗುತ್ತಿದೆ.
ಆದರೆ ಬುಮ್ರಾ ಇನ್ನೂ ಸರಿಯಾಗಿ ಫಿಟ್ ಆಗಿಲ್ಲ ಅಂದಮೇಲೆ ಏಕೆ ತಂಡಕ್ಕೆ ಆಯ್ಕೆ ಮಾಡಬೇಕು ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಕಳೆದ ಬಾರಿಯೂ ಸರಿಯಾಗಿ ಫಿಟ್ ಆಗದೇ ಅವರನ್ನು ಕಣಕ್ಕಿಳಿಸಿದ ಕಾರಣ ಅವರು ಮತ್ತೊಮ್ಮೆ ಇಂಜುರಿಗೆ ಒಳಗಾಗಬೇಕಾಯಿತು. ಹೀಗಾಗಿ ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ ಆಗಲು ಸಮಯ ನೀಡಿ ಎಂದು ಕ್ರಿಕೆಟ್ ಅಭಿಮಾನಿಗಳು ಹೇಳುತ್ತಿದ್ದಾರೆ.