ಭಾರತ ಕ್ರಿಕೆಟ್ ತಂಡಕ್ಕೆ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ 3 ಏಕದಿನ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಕೊನೆಯ ಮತ್ತು ಮೂರನೇ ಏಕದಿನ ಪಂದ್ಯ ತಿರುವನಂತಪುರದಲ್ಲಿ ನಡೆಯಲಿದೆ.
2/ 8
ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಹಾಗೂ ಸಹಾಯಕ ಸಿಬ್ಬಂದಿ ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
3/ 8
ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನವು ಪ್ರಸಿದ್ಧವಾಗಿದೆ. ಹೀಗಾಗಿ ಕೇರಳದಲ್ಲಿರುವ ಟೀಂ ಇಂಡಿಯಾ ಆಟಗಾರರೂ ಸಹ ಈ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿದ್ದು, ದೇವರ ಆಶೀರ್ವಾದ ಪಡೆದಿದ್ದಾರೆ. ಅಲ್ಲದೇ ಎಲ್ಲಾ ಆಟಗಾರರೂ ಸಹ ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ.
4/ 8
ಈ ಸಂದರ್ಭದಲ್ಲಿ ಟೀಂ ಇಂಡಿಯಾ ಆಟಗಾರರು ಸಾಂಪ್ರದಾಯಿಕ ವೇಷಭೂಷಣ ಧರಿಸಿದ್ದರು. ಈ ದೇವಾಲಯದಲ್ಲಿ ದರ್ಶನಕ್ಕಾಗಿ ಪುರುಷರು ಇದೇ ರೀತಿಯ ವೇಷಭೂಷಣಗಳನ್ನು ಧರಿಸಬೇಕು.
5/ 8
ಯುಜ್ವೇಂದ್ರ ಚಹಾಲ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ಸೂರ್ಯಕುಮಾರ್ ಯಾದವ್ ಅವರು ದೇವಾಲಯದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.
6/ 8
ದೇವಾಲಯಕ್ಕೆ ಭೇಟಿ ನೀಡಿದ ಭಾರತೀಯ ಆಟಗಾರರ ಫೋಟೋ ಇದೀಗ ಎಲ್ಲಡೆ ವೈರಲ್ ಆಘಿದ್ದು, ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಅನೇಕ ಆಟಗಾರರು ಕಾಣಿಸಿಕೊಂಡಿಲ್ಲ. ಹೀಗಾಗಿ ಕೆಲವೇ ಕೆಲ ಆಟಗಾರರು ಮಾತ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
7/ 8
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯ ಭಾನುವಾರ ಜನವರಿ 15ರಂದು ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಸ್ಟೇಡಿಯಂನಲ್ಲಿ ನಡೆಯಲಿದೆ.
8/ 8
3ನೇ ಏಕದಿನ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಮತ್ತು ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಅಪ್ಲಿಕೇಶನ್ನಲ್ಲಿ ನೋಡಬಹುದು.