ಅದರಲ್ಲೂ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಅವರ ಗಾಯಗಳು ಟೀಂ ಇಂಡಿಯಾಕ್ಕೆ ದೊಡ್ಡ ಹಿನ್ನಡೆ ಆಯಿತು. ಆದರೆ ಇದೀಗ ಹೊಸ ವರ್ಷದಲ್ಲಿ ಶ್ರೀಲಂಕಾ ಟಿ20 ಸರಣಿಯೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದೆ. ಆ ಬಳಿಕ ಏಕದಿನ ಸರಣಿ ನಡೆಯಲಿದೆ. ಆದ್ರೆ, ಲಂಕಾ ಜೊತೆಗಿನ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಕೇಳಿಬಂದಿದೆ.
ಆದರೆ ಇದೀಗ ಬುಮ್ರಾ ಅವರನ್ನು ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ಏಕದಿನ ತಂಡದಲ್ಲಿ ಸೇರಿಸಿದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಜನವರಿ 10 ರಂದು ಗುವಾಹಟಿಯಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಜನವರಿ 12 ರಂದು ಕೋಲ್ಕತ್ತಾದಲ್ಲಿ ನಡೆಯಲಿದ್ದು, ಮೂರನೇ ಮತ್ತು ಕೊನೆಯ ಏಕದಿನ ಜನವರಿ 15 ರಂದು ತಿರುವನಂತಪುರಂನಲ್ಲಿ ನಡೆಯಲಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಲೋಕೇಶ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್.