ಈ ಪಂದ್ಯದಲ್ಲಿ ಭಾರತ ಗೆದ್ದರೆ ಇಲ್ಲಿ ಸರಣಿ ಗೆಲ್ಲುವ ಸಾಧ್ಯತೆ ಇದೆ. ಹೀಗಾದರೆ ಭಾರತದ ಖಾತೆಗೆ ಸೂಪರ್ ದಾಖಲೆ ಸೇರ್ಪಡೆಯಾಗಲಿದೆ. ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಅದೇ ತಂಡದ ವಿರುದ್ಧ ಸತತ ದ್ವಿಪಕ್ಷೀಯ ಏಕದಿನ ಸರಣಿ ಗೆಲುವು ಸಾಧಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇಲ್ಲಿಯವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸತತ 11 ಏಕದಿನ ಸರಣಿಗಳನ್ನು ಗೆದ್ದಿದೆ.