ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ಟೆಸ್ಟ್ ಗೆದ್ದರೆ ಅಥವಾ ಟೆಸ್ಟ್ ಡ್ರಾ ಮಾಡಿಕೊಂಡರೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಫೈನಲ್ ತಲುಪಲಿದೆ. ಭಾರತವು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡರೆ, ಆಗ ಅದು ಶ್ರೀಲಂಕಾ vs ನ್ಯೂಜಿಲೆಂಡ್ ಸರಣಿಯನ್ನು ಮಾತ್ರವಲ್ಲದೆ ವೆಸ್ಟ್ ಇಂಡೀಸ್ vs ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಮೇಲೆ ಅವಲಂಬಿತವಾಗಲಿದೆ.
ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಮಾರ್ಚ್ 9 ರಂದು ಪ್ರಾರಂಭವಾಗಲಿದ್ದು, ವೆಸ್ಟ್ ಇಂಡೀಸ್ ಫೆಬ್ರವರಿ 28 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಸರಣಿಯನ್ನು ಪ್ರಾರಂಭಿಸಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಶ್ರೀಲಂಕಾ ಮೂರನೇ ಸ್ಥಾನದಲ್ಲಿದೆ ಮತ್ತು ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನದಲ್ಲಿದೆ.