118 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರಂಭಿಕ ಜೋಡಿ ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಬಿರುಸಿನ ಇನ್ನಿಂಗ್ಸ್ ಆಡಿದರು. ಮಾರ್ಷ್ 36 ಎಸೆತಗಳಲ್ಲಿ 66 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಮಾರ್ಷ್ 6 ಬೌಂಡರಿ ಹಾಗೂ ಸಿಕ್ಸರ್‌ಗಳನ್ನು ಬಾರಿಸಿದರು. ಅದೇ ಸಮಯದಲ್ಲಿ, ಹೆಡ್ 30 ಎಸೆತಗಳಲ್ಲಿ 51 ರನ್ ಗಳಿಸಿದರು. ಇದೀಗ ಚೆನ್ನೈನಲ್ಲಿ ನಡೆಯಲಿರುವ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಸರಣಿ ನಿರ್ಧಾರವಾಗಲಿದೆ.