ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಆರಂಭದ ಸಂದರ್ಭದಲ್ಲಿ ಟೀಂ ಇಂಡಿಯಾ ಟೆಸ್ಟ್‌ನಲ್ಲಿ ಗೆದ್ದರೆ ಮಾತ್ರ ಇತರ ತಂಡಗಳ ಫಲಿತಾಂಶಕ್ಕೆ ಕಾಯದೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳುತ್ತಿತ್ತು. ಒಂದೊಮ್ಮೆ ಟೆಸ್ಟ್‌ನಲ್ಲಿ ಭಾರತ ಸೋತರೆ ಅಥವಾ ಡ್ರಾ ಮಾಡಿಕೊಂಡರೆ ತಂಡ ಫೈನಲ್ ತಲುಪುವ ಅವಕಾಶಕ್ಕಾಗಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ ಸರಣಿಯ ಫಲಿತಾಂಶವನ್ನು ಅವಲಂಬಿಸಬೇಕಿತ್ತು. ಇಂತಹ ಸಂದರ್ಭದಲ್ಲಿ ಟೀಂ ಇಂಡಿಯಾ ಫೈನಲ್ ತಲುಪಬೇಕಾದರೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕಿವೀಸ್ ಗೆಲ್ಲಲೇಬೇಕಿತ್ತು. ಇಲ್ಲವೇ ಡ್ರಾದಲ್ಲಿ ಅಂತ್ಯಗೊಳಿಸಬೇಕಿತ್ತು.
285 ರನ್ ಗಳ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ಕಿವೀಸ್ ತಂಡವನ್ನು ಅಸಿತಾ ಫೆರ್ನಾಂಡೋ ನಡುಗಿಸಿದರು. ಅದರೊಂದಿಗೆ ಒಂದು ಹಂತದಲ್ಲಿ ಸುಲಭವಾಗಿ ಗೆಲ್ಲುವಂತಿದ್ದ ಕಿವೀಸ್ ದಿಢೀರ್ ಕುಸಿದು ಬಿದ್ದಿತು. ಆದರೆ ಮಾಜಿ ನಾಯಕ ಕೇನ್ ವಿಲಿಯಮ್ಸನ್ ವೀರೋಚಿತ ಹೋರಾಟದ ಮೂಲಕ ಕಿವೀಸ್ ತಂಡಕ್ಕೆ ಗೆಲುವು ತಂದುಕೊಟ್ಟರು. ಇನ್ನೂ ಶ್ರೀಲಂಕಾ ಎರಡನೇ ಟೆಸ್ಟ್ ಗೆದ್ದರೂ ಸರಣಿ ಡ್ರಾದಲ್ಲಿ ಅಂತ್ಯವಾಗಲಿದೆ. ಇದರೊಂದಿಗೆ ಭಾರತ ಫೈನಲ್ ತಲುಪಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಸ್ಟ್ರೇಲಿಯಾ ಈಗಾಗಲೇ ಫೈನಲ್ ತಲುಪಿದೆ.
ಈ ವರ್ಷದ ಫೈನಲ್ನಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇನ್ನು, ಇಂದು ಅಂತ್ಯವಾದ ಟೀಂ ಇಂಡಿಯಾ ಹಾಗೂ ಭಾರತದ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇದರೊಂದಿಗೆ ಓವಲ್ ಕ್ರೀಡಾಂಗಣದಲ್ಲೂ ಟೀಂ ಇಂಡಿಯಾ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ. ಆದರೆ ಆಸ್ಟ್ರೇಲಿಯಾ ಪಂದ್ಯದಲ್ಲಿ ಗಟ್ಟಿ ಪೈಪೋಟಿ ನೀಡುವ ನಿರೀಕ್ಷೆ ಇದ್ದು, ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದರೆ ತಪ್ಪಾಗುವುದಿಲ್ಲ.