IND vs NZ: ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ ಶುಭಮನ್ ಗಿಲ್! ಟೀಂ ಇಂಡಿಯಾಗೆ ಜೂನಿಯರ್ ಕೊಹ್ಲಿ ಎಂಟ್ರಿ ಎಂದ ಫ್ಯಾನ್ಸ್
IND vs NZ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ (IND vs NZ) ಇಂದಿನಿಂದ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ. ಈ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಶುಭ್ಮನ್ ಗಿಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ.
2/ 7
ಕಳೆದ ಶ್ರೀಲಂಕಾ ವಿರುದ್ಧದ ಕೊನೆಯ ಪಂದ್ಯದಲ್ಲಿ ಅಬ್ಬರಿಸಿದ್ದ ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಮತ್ತೆ ಇಂದು ನ್ಯೂಜಿಲ್ಯಾಂಡ್ ವಿರುದ್ಧವೂ ಭರ್ಜರಿಯಾಗಿ ಬ್ಯಾಟಿಂಗ್ ಮಾಡುವ ಮೂಲಕ ಆಕರ್ಷಕ ಶತಕ ಸಿಡಿಸಿದ್ದಾರೆ.
3/ 7
ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿದ ಶುಭ್ಮನ್ ಗಿಲ್ ಸತತ ಎರಡನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ.
4/ 7
ನ್ಯೂಜಿಲೆಂಡ್ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿದ ಶುಭಮನ್ ಗಿಲ್ ಕೇವಲ 52 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 50 ರನ್ ಪೂರೈಸಿದರು. ಇದರ ನಂತರ, ತಮ್ಮ ಇನ್ನಿಂಗ್ಸ್ ಅನ್ನು ವೇಗಗೊಳಿಸುತ್ತಾ, 88 ಎಸೆತದಲ್ಲಿ ಭರ್ಜರಿ ಶತಕ ಸಿಡಿಸಿ ಆಟವಾಡುತ್ತಿದ್ದಾರೆ.
5/ 7
ಈ ಮೂಲಕ ಯುವ ಆಟಗಾರ ಶುಭ್ಮನ್ ಗಿಲ್ ಮೂರನೇ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಅಲ್ಲದೇ ಈ ಮೂಲಕ ಆರಂಭಿಕ ಕೊರತೆಗೆ ಅಂತ್ಯ ಹಾಡಿದ್ದಾರೆ. ಜೊತೆಗೆ ಅಭಿಮಾನಿಗಳು ಟೀಂ ಇಂಡಿಯಾಗೆ ಜೂನಿಯರ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ ಎಂದು ಗಿಲ್ ಅವರನ್ನು ಶ್ಲಾಘಿಸಿದ್ದಾರೆ.