IND vs SA: ಭಾರತ - ಸೌತ್ ಆಫ್ರಿಕಾ ಫೈನಲ್ ಫೈಟ್, ಪಂದ್ಯ ವೀಕ್ಷಿಸುತ್ತಿರುವ ವಿಪಕ್ಷ ನಾಯಕ ಸಿದ್ದು
ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಿನ ಐದನೇ ಹಾಗೂ ಕೊನೆಯ ಟಿ20 (5th T20) ಪಂದ್ಯವು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ನಡೆಯುತ್ತಿದೆ. ಆದರೆ ಬೆಂಗಳೂರಿನಲ್ಲಿ ಮಳೆಯ ಕಾರಣ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಿನ ಐದನೇ ಹಾಗೂ ಕೊನೆಯ ಟಿ20 ಪಂದ್ಯವು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಟೂರ್ನಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2-2 ರ ಸಮಬಲ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಗಳೆರಡಕ್ಕೂ ನಿರ್ಣಾಯಕವಾಗಿದೆ.
2/ 7
ಸುಮಾರು 2 ವರ್ಷಗಳ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಪಂದ್ಯ ನಡೆಯುತ್ತಿರುವುದರಿಂದ ಪ್ರೇಕ್ಷಕರು ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅದೇ ನಿರೀಕ್ಷೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಹ ಇಂದಿನ ಪಂದ್ಯಕ್ಕೆ ಸಾಕ್ಷಿಯಾಗಿದ್ದಾರೆ.
3/ 7
ಹೌದು, ಇಂದಿನ ಪಂದ್ಯ ವೀಕ್ಷಣೆ ಮಾಡಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಪರಿಷತ್ ಸದಸ್ಯರಾದ ಕೆ ಗೋವಿಂದರಾಜ್ ಅವರು ಆಗಮಿಸಿದ್ದು, ಪ್ರಕಾಶ್ ರಾಥೋಡ್ ಜೊತೆ ಕ್ರಿಕೆಟ್ ಪಂದ್ಯ ವೀಕ್ಷಣೆ ಮಾಡುತ್ತಿದ್ದಾರೆ.
4/ 7
ಮೊದಲಿನಿಂದಲೂ ಕ್ರಿಕೆಟ್ ಮೇಲೆ ಆಸಕ್ತಿ ಇರುವ ಸಿದ್ದು, ಇಂದು ಪಂದ್ಯವನ್ನು ನೇರವಾಗಿ ವೀಕ್ಷಿಸಲು ಚಿನ್ನಸ್ವಾಮಿ ಮೈದಾನಕ್ಕೆ ಆಗಮಿಸಿದ್ದಾರೆ. ಸಿದ್ಧರಾಮಯ್ಯನವರು ಹಿಂದೆಯೂ ಅನೇಕ ಬಾರಿ ಬೆಂಗಳೂರಿನಲ್ಲಿ ಕ್ರಿಕೆಟ್ ಪಮದ್ಯಗಳಾದ ವೇಳೆ ನೇರವಾಗಿ ವೇಕ್ಷಿಸಿದಂತಹ ಉದಾಹರಣೆಗಳಿವೆ.
5/ 7
ಇನ್ನು, ಬೆಂಗಳೂರಿನಾದ್ಯಂತ ಇಂದು ಸಂಜೆಯಿಂದ ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈಗಾಗಲೇ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿದೆ.
6/ 7
ಈವರೆಗೂ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ದ್ವಿಪಕ್ಷೀಯ T20I ಸರಣಿಯನ್ನೂ ಗೆದ್ದಲ್ಲಿ. ಹೀಗಾಗಿ ಇಂದಿನ ಪಂದ್ಯ ಗೆಲ್ಲುವುದರೊಂದಿಗೆ ಹೊಸ ಇತಿಹಾಸವನ್ನು ಭಾರತ ತಂಡ ಮಾಡಲಿದೆಯಾ ಎಂದು ಕಾದು ನೋಡಬೇಕಿದೆ.
7/ 7
sದ್ಯ ಪರಿಸ್ಥಿತಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ 3.3 ಓವರ್ ಗಳಲ್ಲಿ 28 ರನ್ ಗೆ 2 ವಿಕೆಟ್ ಕಳೆದುಕೊಂಡಿದೆ. ಮಳೆಯ ಕಾರಣ ಪಂದ್ಯವನ್ನು 19 ಓವರ್ಗಳಿಗೆ ಸೀಮಿತಗೊಳಿಸಲಾಗಿದೆ.