ಸೋಮವಾರ ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಪೃಥ್ವಿ ಶಾ ಲಭ್ಯರಾಗಲಿದ್ದಾರೆ ಎಂದು ಪ್ರಮುಖ ಮಾಧ್ಯಮವೊಂದು ತಿಳಿಸಿದೆ. ಪೃಥ್ವಿ ಶಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಕಳೆದ ಪಂದ್ಯದ ವೇಳೆ ನಾಯಕ ರಿಷಬ್ ಪಂತ್ ಪ್ರಸ್ತಾಪಿಸಿದ್ದರು ಎಂದು ತಿಳಿದುಬಂದಿದೆ. ಪೃಥ್ವಿ ಶಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.