ಪಂಜಾಬ್ ಕಿಂಗ್ಸ್ ಸ್ಟಾರ್ ಬ್ಯಾಟ್ಸ್ಮೆನ್ ಜಾನಿ ಬೈರ್‌ಸ್ಟೋವ್ ಕೂಡ ಭಾರತಕ್ಕೆ ಆಗಮಿಸಿದ್ದಾರೆ. ಅವರು ನಿಯಮಗಳ ಪ್ರಕಾರ 3 ದಿನಗಳ ಕ್ವಾರಂಟೈನ್‌ನಲ್ಲಿರುತ್ತಾರೆ. ಇದರೊಂದಿಗೆ ಶುಕ್ರವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಪರ ಆಡುವ ಸಾಧ್ಯತೆ ಇದೆ. ಇವರು ಇಂಗ್ಲೆಂಡ್ ತಂಡವು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದರಿಂದ ಐಪಿಎಲ್ ಸೇರಿಕೊಳ್ಳುವುದು ತಡವಾಗಿದೆ.