ಪಂಜಾಬ್ ಕಿಂಗ್ಸ್ ವಿರುದ್ಧದ ಫಾಪ್ ಡು ಪ್ಲೆಸಿಸ್ ಅವರ ಇನ್ನಿಂಗ್ಸ್ ನೋಡಿದ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯವನ್ನು ಸೋಲುತ್ತದೆ ಎಂದು ಯಾರಾದರೂ ನಿರೀಕ್ಷಿಸಿರಲಿಲ್ಲ. ಆದರೆ, ಬೆಂಗಳೂರು ತಂಡ ಕಳಪೆ ಬೌಲಿಂಗ್ ಮತ್ತು ಕಳಪೆ ಫೀಲ್ಡಿಂಗ್‌ನಿಂದ ಪಂದ್ಯವನ್ನು ಕಳೆದುಕೊಂಡಿದೆ. ಪಂಜಾಬ್ ಕಿಂಗ್ಸ್ ಕೂಡ 205 ರನ್ ಗಳ ಬೃಹತ್ ಗುರಿ ಬೆನ್ನತ್ತಿ ಇನ್ನೂ ಒಂದು ಓವರ್ ಬಾಕಿ ಉಳಿದಿರುವಂತೆ ಗೆಲುವನ್ನು ದಾಖಲಿಸಿತು.
ಈ ಮೂಲಕ ಬೆಂಗಳೂರು ತಂಡ ಅತಿ ಹೆಚ್ಚು ವೈಡ್ ಹಾಕಿದ ತಂಡದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು, ಐಪಿಎಲ್‌ನಲ್ಲಿ ಅತಿ ಹೆಚ್ಚು ವೈಡ್‌ಗಳನ್ನು ಹೊಂದಿರುವ ಟಾಪ್ 5 ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1, 3 ಮತ್ತು 5ನೇ ಸ್ಥಾನ ಪಡೆದುಕೊಂಡಿದೆ. 2018ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ತಂಡ ಈ ಸಾಧನೆ ಮಾಡಿತ್ತು. ಆ ಪಂದ್ಯದಲ್ಲಿ ಬೆಂಗಳೂರು ತಂಡ ಸತತ 18 ವೈಡ್ ಹಾಕಿತ್ತು.