ಚೆನ್ನೈ ವಿರುದ್ಧ ಜಯ ಸಾಧಿಸಿರುವ ಕೋಲ್ಕತ್ತಾ ಈ ಪಂದ್ಯದಲ್ಲೂ ತನ್ನ ಓಟ ಮುಂದುವರಿಸುವ ನಿರೀಕ್ಷೆಯಲ್ಲಿದೆ. ಅಜಿಂಕ್ಯ ರಹಾನೆ ಫಾರ್ಮ್‌ಗೆ ಮರಳಿರುವುದು ತಂಡಕ್ಕೆ ಉತ್ತಮ ಬೆಳವಣಿಗೆ. ಕ್ಯಾಪ್ಟನ್ ಶ್ರೇಯಸ್ ಅಯ್ಯರ್, ಸ್ಯಾಮ್ ಬಿಲ್ಲಿಂಗ್ಸ್, ಜಾಕ್ಸನ್. ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಬೌಲಿಂಗ್ ನಲ್ಲಿ ಉಮೇಶ್ ಯಾದವ್ ಅದ್ಭುತ ಪ್ರದರ್ಶನ ನೀಡಿದರೆ, ಶಿವಂ ಮಾವಿ, ಸ್ಪಿನ್ನರ್ ಗಳಾದ ವರುಣ್ ಚಕ್ರವರ್ತಿ ಮತ್ತು ಸುನಿಲ್ ನರೈನ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಲ್ ರೌಂಡರ್ ಆಂಡ್ರ್ಯೂ ರಸೆಲ್ ತಂಡದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಮೊದಲ ಪಂದ್ಯದಲ್ಲಿ ಸೋತಿರುವ ಆರ್‌ಸಿಬಿ ಮೊದಲ ಜಯ ದಾಖಲಿಸುವ ತವಕದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ 57 ಎಸೆತಗಳಲ್ಲಿ 88 ರನ್ ಗಳಿಸಿದ್ದರು. ನಾಯಕ ಸ್ಥಾನದಿಂದ ಕೆಳಗಿಳಿದ ವಿರಾಟ್ ಕೊಹ್ಲಿ ಖೂಡ ಉತ್ತಮ ಫಾರ್ಮ್ನಲ್ಲಿದ್ದು, ಆರಂಭಿಕರಾದ ಅನುಜ್ ರಾವತ್, ಕೀಪರ್ ದಿನೇಶ್ ಕಾರ್ತಿಕ್ ಫಾರ್ಮ್‌ಗೆ ಮರಳ ಬೇಕಾದ ಅನಿವಾರ್ಯತೆ ಇದೆ.