IPL 2023: ಐಪಿಎಲ್ 16ನೇ ಸೀಸನ್ ಮಾರ್ಚ್ 31ರಿಂದ ಆರಂಭವಾಗಲಿದೆ. ಈ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಮೊದಲ ಪಂದ್ಯ ಏಪ್ರಿಲ್ 2 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯಲಿದ್ದು, ಮುಂಬೈ ತಂಡದ ಅಭಿಮಾನಿಗಳು ಅದೊಂದು ವಿಚಾರಕ್ಕಾಗಿ ಸಾಕಷ್ಟು ಕಾತುರರಾಗಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಮೊದಲ ಪತ್ರಿಕಾಗೋಷ್ಠಿ ಮುಂಬೈನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಮಾರ್ಕ್ ಬೌಚರ್ ಉಪಸ್ಥಿತರಿದ್ದರು.
2/ 8
ಈ ಬಾರಿ ಅರ್ಜುನ್ ತೆಂಡೂಲ್ಕರ್ ಅವರನ್ನು ಪ್ಲೇಯಿಂಗ್ 11 ರಲ್ಲಿ ತೆಗೆದುಕೊಳ್ಳುವ ಬಗ್ಗೆ ಪತ್ರಕರ್ತರು ರೋಹಿತ್ ಅವರನ್ನು ಕೇಳಿದರು. ಆಗ ಅರ್ಜುನ್ ಬಗ್ಗೆ ರೋಹಿತ್ ಮತ್ತು ಮಾರ್ಕ್ ಬೌಚರ್ ದೊಡ್ಡ ಹೇಳಿಕೆ ನೀಡಿದ್ದಾರೆ.
3/ 8
ಮುಂಬೈ ತಂಡದ ಮ್ಯಾನೇಜ್‌ಮೆಂಟ್ ಅರ್ಜುನ್ ಮೇಲೆ ಕಣ್ಣಿಟ್ಟಿದ್ದು, ಈ ವರ್ಷ ಆಡುವ XI ನಲ್ಲಿ ಅವರಿಗೆ ಅವಕಾಶ ಸಿಗಬಹುದು ಎಂದು ಕೋಚ್ ಮತ್ತು ರೋಹಿತ್ ಶರ್ಮಾ ಹೇಳಿದ್ದಾರೆ.
4/ 8
ಅರ್ಜುನ್ ತೆಂಡೂಲ್ಕರ್ 2021 ರಿಂದ ಮುಂಬೈ ಇಂಡಿಯನ್ಸ್‌ನ ಭಾಗವಾಗಿದ್ದಾರೆ, ಆದರೆ ಮೊದಲ ವರ್ಷದಲ್ಲಿ ಪಾದಾರ್ಪಣೆ ಮಾಡುವ ಅವಕಾಶವನ್ನು ಪಡೆಯಲಿಲ್ಲ. ಜೊತೆಗೆ 2022ರಲ್ಲಿಯೂ 11ರಲ್ಲಿ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಗಲಿಲ್ಲ.
5/ 8
ಹಾಗಾಗಿ ಮುಂಬೈ ಇಂಡಿಯನ್ಸ್‌ನ ಭಾಗವಾಗಿದ್ದರೂ ಅರ್ಜುನ್‌ಗೆ ಐಪಿಎಲ್‌ಗೆ ಪಾದಾರ್ಪಣೆ ಮಾಡಲು ಸಾಧ್ಯವಾಗಲಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಅರ್ಜುನ್ ತೆಂಡೂಲ್ಕರ್ ಕಳೆದ ಕೆಲವು ಪಂದ್ಯಗಳಲ್ಲಿ ಉತ್ತಮ ಕ್ರಿಕೆಟ್ ಆಡಿದ್ದಾರೆ. ಅವರು ಉತ್ತಮ ಬೌಲಿಂಗ್ ಮಾಡುತ್ತಾರೆ.
6/ 8
ಹೀಗಾಗಿ ಅವರು ಈ ವರ್ಷ ಆಡುವ 11ರಲ್ಲಿ ಇರುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಹೇಳುವ ಮೂಲಕ ಅರ್ಜುನ್ ತೆಂಡೂಲ್ಕರ್ ಅವರು ಈ ಬಾರಿ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಸೂಚನೆ ನೀಡಿದ್ದಾರೆ.
7/ 8
ಕಳೆದ ವರ್ಷ ಮೆಗಾ ಹರಾಜಿನಲ್ಲಿ 30 ಲಕ್ಷಕ್ಕೆ ಬಿಡ್ ಮಾಡುವ ಮೂಲಕ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡರು. ಈ ಹಿಂದೆ 2021ರಲ್ಲಿ ಅವರನ್ನು 20 ಲಕ್ಷ ಮೂಲ ಬೆಲೆಗೆ ಖರೀದಿಸಲಾಗಿತ್ತು.
8/ 8
ರಣಜಿ ಟ್ರೋಫಿಯ ಅನುಭವದೊಂದಿಗೆ ಅರ್ಜುನ್ ತೆಂಡೂಲ್ಕರ್ ಈ ಬಾರಿ ಐಪಿಎಲ್‌ಗೆ ಪಾದಾರ್ಪಣೆ ಮಾಡಬಹುದು ಎನ್ನಲಾಗುತ್ತಿದೆ. ಅವರು ಗೋವಾ ಪರ ರಣಜಿಗೆ ಪದಾರ್ಪಣೆ ಮಾಡಿದರು ಮತ್ತು ತಮ್ಮ ಮೊದಲ ಪಂದ್ಯದಲ್ಲಿ ಶತಕ ಗಳಿಸಿದರು. ಅರ್ಜುನ್ ತೆಂಡೂಲ್ಕರ್ 7 ಪ್ರಥಮ ದರ್ಜೆ ಪಂದ್ಯಗಳಲ್ಲಿ 12 ವಿಕೆಟ್‌ಗಳ ಜೊತೆಗೆ 233 ರನ್ ಗಳಿಸಿದ್ದಾರೆ.