ಟಿ20 ಲೀಗ್‌ನಲ್ಲಿ ಅಜಿಂಕ್ಯ ರಹಾನೆ ಅವರ ಕೊನೆಯ 3 ಸೀಸನ್‌ಗಳು ವಿಶೇಷವೇನೂ ಆಗಿರಲಿಲ್ಲ. 2022 ರಲ್ಲಿ ಅವರು ಕೇವಲ 7 ಪಂದ್ಯಗಳನ್ನು ಆಡಿದ್ದರು. 19 ರ ಸರಾಸರಿಯಲ್ಲಿ 133 ರನ್ ಗಳಿಸಿದ್ದರು. 2021ರಲ್ಲಿ ಕೇವಲ 2 ಪಂದ್ಯಗಳಲ್ಲಿ ಅವಕಾಶ ಪಡೆದಿದ್ದರು. ಈ ವೇಳೆ ಅವರು 8 ರನ್ ಗಳಿಸಿದ್ದರು. 2020ರಲ್ಲಿ ಭಾರತದ ಹಿರಿಯ ಬ್ಯಾಟ್ಸ್‌ಮನ್ ರಹಾನೆ 9 ಪಂದ್ಯಗಳಲ್ಲಿ 113 ರನ್ ಗಳಿಸಿದ್ದರು.
ಈ ಪಟ್ಟಿಯಲ್ಲಿ 34 ವರ್ಷದ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಕೂಡ ಕಾಣಿಸಿಕೊಂಡಿದ್ದಾರೆ. 2022 ರ ಹರಾಜಿನಲ್ಲಿ ಯಾವುದೇ ತಂಡವು ಅವರನ್ನು ಖರೀದಿಸಲಿಲ್ಲ. 2021 ರ ಋತುವಿನಲ್ಲಿ ಅವರು ಕೇವಲ ಒಂದು ಪಂದ್ಯವನ್ನು ಆಡಿದರು ಮತ್ತು ಒಂದು ವಿಕೆಟ್ ಪಡೆದರು. ಐಪಿಎಲ್ 2023 ರಲ್ಲಿ ಅವರು 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಜೊತೆ ಆಡುತ್ತಿದ್ದಾರೆ. ಅವರು ಇದುವರೆಗೆ 3 ಪಂದ್ಯಗಳಲ್ಲಿ 20ರ ಸರಾಸರಿಯಲ್ಲಿ 4 ವಿಕೆಟ್ ಪಡೆದಿದ್ದಾರೆ. 22 ರನ್ನಿಗೆ 3 ವಿಕೆಟ್ ಕಬಳಿಸಿದ್ದು ಅತ್ಯುತ್ತಮ ಪ್ರದರ್ಶನ. ಆ
34ರ ಹರೆಯದ ವೇಗದ ಬೌಲರ್ ಮೋಹಿತ್ ಶರ್ಮಾ 2013ರಲ್ಲಿ ಟಿ20 ಲೀಗ್‌ಗೆ ಪಾದಾರ್ಪಣೆ ಮಾಡಿದ್ದರು. ಮೊದಲ ಸೀಸನ್‌ನಲ್ಲಿಯೇ 20 ವಿಕೆಟ್‌ಗಳನ್ನು ಉರುಳಿಸಿದ್ದರು. 2015ರ ವಿಶ್ವಕಪ್ ವರೆಗೆ ಟೀಂ ಇಂಡಿಯಾ ಪರ ಆಡಿದ್ದರು. ಆದರೆ ಕಳಪೆ ಪ್ರದರ್ಶನದಿಂದಾಗಿ ತಂಡದಿಂದ ದೂರವಾಗಿದ್ದರು. ಅವರು ಇದುವರೆಗೆ ಒಂದೇ ಒಂದು ಪಂದ್ಯವನ್ನು ಆಡಿದ್ದಾರೆ. ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದ ಅವರು ಪಂಜಾಬ್ ಕಿಂಗ್ಸ್ ವಿರುದ್ಧ 4 ಓವರ್ ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರು.