Rishabh Pant: ಕಳೆದ ತಿಂಗಳ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ರಿಷಭ್ ಪಂತ್ ಗಂಭೀರ ಗಾಯಗೊಂಡಿದ್ದಾರೆ. ಇದರಿಂದಾಗಿ ಪಂತ್ ಇಡೀ ವರ್ಷ ಕ್ರಿಕೆಟ್ ನಿಂದ ದೂರ ಉಳಿಯುವ ಸಾಧ್ಯತೆ ಇದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಶಪ್ ಪಂತ್ ಅಸ್ಥಿರಜ್ಜು ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ತಜ್ಞರ ಪ್ರಕಾರ, ಅವರು ಶಸ್ತ್ರಚಿಕಿತ್ಸೆಯ ನಂತರ ಮೈದಾನಕ್ಕೆ ಮರಳಲು 6 ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಹುದು ಎಂದಿದ್ದಾರೆ.
2/ 8
ಈ ಹಿಂದೆ ರಿಷಭ್ ಪಂತ್ ಅವರ ಗಾಯ ರವೀಂದ್ರ ಜಡೇಜಾ ಅವರ ಗಾಯದ ಸ್ವರೂಪವನ್ನೇ ಹೊಂದಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಗಾಯಗೊಂಡಿದ್ದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಅಸ್ಥಿರಜ್ಜಿಗೂ ಸಹ ಗಾಯವಾಗಿತ್ತು.
3/ 8
ಪಂತ್ ಗಾಯಗೊಂಡಿರುವುದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಟೀಂ ಇಂಡಿಯಾಕ್ಕೆ ಹಿನ್ನಡೆ ಎಂದೇ ಹೇಳಬಹುದು. ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಸೀಸನ್ನಲ್ಲಿ ಪಂತ್ ಆಡುವುದಿಲ್ಲ ಎಂದು ಸೌರವ್ ಗಂಗೂಲಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
4/ 8
ಈ ಕ್ರಮದಲ್ಲಿ ಪಂತ್ ಬದಲಿಗೆ ಯಾರನ್ನು ನಾಯಕರನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಫ್ರಾಂಚೈಸಿಗೆ ತಲೆನೋವಾಗಿ ಪರಿಣಮಿಸಿದೆ. ದೆಹಲಿ ನಾಯಕತ್ವದ ರೇಸ್ ನಲ್ಲಿ ಹಲವು ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.
5/ 8
ಆಸ್ಟ್ರೇಲಿಯಾದ ಸ್ಟಾರ್ ಓಪನರ್ ಡೇವಿಡ್ ವಾರ್ನರ್ ಹೆಸರು ಅಗ್ರಸ್ಥಾನದಲ್ಲಿದ್ದಾರೆ. ವಾರ್ನರ್ ಈ ಹಿಂದೆ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿದ್ದು ಗೊತ್ತೇ ಇದೆ.
6/ 8
ವಾರ್ನರ್ ನಾಯಕತ್ವದಲ್ಲಿ ಸನ್ರೈಸರ್ಸ್ ಹೈದರಾಬಾದ್ 2016ರಲ್ಲಿ ಐಪಿಎಲ್ ಚಾಂಪಿಯನ್ ಆಗಿತ್ತು. ವಾರ್ನರ್ ಅವರ ಅನುಭವದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವವನ್ನು ಹಸ್ತಾಂತರಿಸುವ ಹೆಚ್ಚಿನ ಸಾಧ್ಯತೆಗಳಿವೆ.
7/ 8
ಆದರೆ ವಾರ್ನರ್ ಜೊತೆಗೆ ಆಸ್ಟ್ರೇಲಿಯಾದ ಮತ್ತೊಬ್ಬ ಆಲ್ ರೌಂಡರ್ ಮಿಚೆಲ್ ಮಾರ್ಷ್ ಕೂಡ ನಾಯಕತ್ವದ ರೇಸ್ ನಲ್ಲಿದ್ದಾರೆ. ಆದರೆ ಇವರಿಗೆ ಅನುಭವ ಕಡಿಮೆ ಇರುವುದರಿಂದ ನಾಯಕತ್ವ ನೀಡುವ ಸಾಧ್ಯತೆ ಕಡಿಮೆ ಇದೆ.
8/ 8
ಮಾರ್ಷ್ ಜೊತೆಗೆ ಭಾರತದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಅವರ ಹೆಸರನ್ನು ಕೂಡ ನಾಯಕತ್ವಕ್ಕೆ ಪರಿಗಣಿಸಲಾಗುತ್ತಿದೆ. ಪೃಥ್ವಿ ಶಾ ಸಹ ಈ ಬಾರಿಯ ರಣಜಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.