ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಧೋನಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು ಎಂದು ಸಿಎಸ್‌ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್ ಬಹಿರಂಗಪಡಿಸಿದ್ದಾರೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಧೋನಿ ಆಡುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ. ಧೋನಿ ಆಡದೇ ಇದ್ದರೆ ಟೀಮ್ ಮ್ಯಾನೇಜ್ ಮೆಂಟ್ ಸಮಸ್ಯೆ ಹೆಚ್ಚಾಗಬಹುದು. ಮುಂಬರುವ ಪಂದ್ಯಗಳಿಗೆ ಅವರು ಹೊಸ ನಾಯಕನನ್ನು ಹುಡುಕಬೇಕಾಗಿದೆ.