ಐಪಿಎಲ್ 2023ರ 24ನೇ ಪಂದ್ಯದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 4 ಬಾರಿ ಪ್ರಶಸ್ತಿ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ಮುಖಾಮುಖಿಯಾಗಲಿವೆ. ಅಲ್ಲದೇ ಈ ಪಂದ್ಯದಲ್ಲಿ ಟಾಸ್ ಸಹ ಮಹತ್ವದ ಪಾತ್ರವಹಿಸಲಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಟಾಸ್ ಗೆದ್ದ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ, ಇಲ್ಲಿ ಈವರೆಗೆ ಚೇಸಿಂಗ್ ಮಾಡಿದ ತಂಡ ಗೆದ್ದಿರುವುದು ಹೆಚ್ಚು.
ಚಿನ್ನಸ್ವಾಮಿ ಮೈದಾನ ಬ್ಯಾಟಿಂಗ್ ಸ್ನೇಹಿ ಮೈದಾನವಾಗಿದೆ.ಆದರೆ ಇತ್ತೀಚೆಗೆ ವಿಕೆಟ್‌ಗೆ ಕಪ್ಪು ಮಣ್ಣನ್ನು ಬಳಸಲಾಗುತ್ತಿದ್ದು, ವಿಕೆಟ್‌ಗಳು ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ20ಯಲ್ಲಿ ಚೇಸಿಂಗ್ ತಂಡ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡುತ್ತಾರೆ.