ಐಪಿಎಲ್ ಹರಾಜಿನಲ್ಲಿ ಇಂಗ್ಲೆಂಡ್ನ ಸ್ಯಾಮ್ ಕರನ್ ಹೊಸ ದಾಖಲೆ ಬರೆದಿದ್ದಾರೆ. ಕರನ್ ಅವರನ್ನು ಪಂಜಾಬ್ ಕಿಂಗ್ಸ್ 18.50 ಕೋಟಿಗೆ ಖರೀದಿಸಿದೆ. ಈ ಹಿಂದೆ ದಕ್ಷಿಣ ಆಫ್ರಿಕಾದ ಕ್ರಿಸ್ ಮಾರಿಸ್ (16.25 ಕೋಟಿ ರೂ.) ಹರಾಜಿನಲ್ಲಿ ಅತಿ ಹೆಚ್ಚು ಬಿಡ್ ಆಗಿದ್ದರು. ಈ ಮೂಲಕ ಕರನ್ ಐಪಿಎಲ್ ಹರಾಜಿನಲ್ಲಿ ಇದುವರೆಗಿನ ಅತಿ ಹೆಚ್ಚು ಬೆಲೆಯ ಆಟಗಾರ ಎನಿಸಿಕೊಂಡಿದ್ದಾರೆ.