ಬಾಂಗ್ಲಾದೇಶ ಸರಣಿಯಲ್ಲಿ ತಮ್ಮ ಬ್ಯಾಟಿಂಗ್‌ನಿಂದ ಪ್ರಭಾವಿತರಾಗಿದ್ದ ಹ್ಯಾರಿ ಟೆಕ್ಟರ್ ಏಕದಿನ ರ‍್ಯಾಂಕಿಂಗ್ ನಲ್ಲಿ 7ನೇ ಸ್ಥಾನಕ್ಕೆ ಏರಿದ್ದಾರೆ. ಇದರೊಂದಿಗೆ ಕೊಹ್ಲಿ 8ನೇ ಸ್ಥಾನಕ್ಕೆ ಕುಸಿದಿದ್ದಾರೆ. ಡಿ ಕಾಕ್ 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ 722 ಅಂಕ ಹೊಂದಿರುವ ಹ್ಯಾರಿ ಐರ್ಲೆಂಡ್ ಪರ ಅತ್ಯಧಿಕ ರ‍್ಯಾಂಕಿಂಗ್ ಪಡೆದ ಆಟಗಾರ ಎಂಬ ದಾಖಲೆ ಸೃಷ್ಟಿಸಿದ್ದಾರೆ.
ಏಕದಿನ ಶ್ರೇಯಾಂಕದಲ್ಲಿ 7ನೇ ಸ್ಥಾನದಲ್ಲಿರುವ ಕೊಹ್ಲಿ ರೋಹಿತ್ ಶರ್ಮಾಗಿಂತ ಮುಂದಿದ್ದಾರೆ. ಸದ್ಯ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ 8ನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ. ಐರಿಶ್ ಬ್ಯಾಟ್ಸ್‌ಮನ್ ಹ್ಯಾರಿ ಟೆಕ್ಟರ್ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ 206 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.
ಇದರೊಂದಿಗೆ ಐರ್ಲೆಂಡ್‌ನ ಏಕದಿನ ರ‍್ಯಾಂಕಿಂಗ್‌ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಈ ದಾಖಲೆಯನ್ನು ಇಲ್ಲಿಯವರೆಗೆ ಸ್ಟಿರ್ಲಿಂಗ್ ಹೊಂದಿದ್ದರು. ಸ್ಟಿರ್ಲಿಂಗ್ ತನ್ನ ಖಾತೆಯಲ್ಲಿ 697 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, ಟೆಕ್ಟರ್ 722 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಆ ದಾಖಲೆಯನ್ನು ಮೀರಿಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕ್ವಿಂಟನ್ ಡಿ ಕಾಕ್ ಜೊತೆಗೆ ಹ್ಯಾರಿ ಟೆಕ್ಟರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ (10 ನೇ), ಆಸ್ಟ್ರೇಲಿಯಾದ ಸ್ಟಾರ್ ಸ್ಟೀವ್ ಸ್ಮಿತ್ (11 ನೇ) ಮತ್ತು ಜೋಸ್ ಬಟ್ಲರ್ (15 ನೇ) ಅವರನ್ನು ಹಿಂದಿಕ್ಕಿದ್ದಾರೆ.