ಕ್ರಿಕೆಟ್ನಿಂದ ದೂರ ಉಳಿಯುವುದು ತುಂಬಾ ಕಷ್ಟದ ವಿಷಯ. ನನ್ನ ಆರೋಗ್ಯ ಸ್ಥಿತಿ ಉತ್ತಮವಾಗಿಲ್ಲ ಮತ್ತು ಆದ್ದರಿಂದ ನಾನು ರಣಜಿ ಟ್ರೋಫಿ ಋತುವಿನಲ್ಲಿ ಹೆಚ್ಚಿನ ಪಂದ್ಯಗಳನ್ನು ಕಳೆದುಕೊಳ್ಳಲಿದ್ದೇನೆ. ಆದರೆ ಶೀಘ್ರದಲ್ಲೇ ಚೇತರಿಸಿಕೊಂಡು ತಂಡಕ್ಕೆ ಮರಳುತ್ತೇನೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು" ಎಂದು ಟ್ವೀಟ್ ಮಾಡಿದ್ದಾರೆ. ಖಲೀಲ್ ಯಾವ ತೊಂದರೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದು ತಿಳಿದಿಲ್ಲ.
IPL 2022 ರ ಮೆಗಾ ಹರಾಜಿನಲ್ಲಿ, ಖಲೀಲ್ ಅಹ್ಮದ್ಗಾಗಿ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತೀವ್ರ ಪೈಪೋಟಿ ನಡೆಸಿದವು. ಅಂತಿಮವಾಗಿ ದೆಹಲಿ ತಂಡ 5.25 ಕೋಟಿ ರೂ. ನೀಡಿ ಖರೀದಿಸಿತ್ತು. ಖಲೀಲ್ ಅಹ್ಮದ್ ಈ ವರ್ಷದ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಅವರು 10 ಪಂದ್ಯಗಳನ್ನು ಆಡಿದ್ದಾರೆ ಮತ್ತು 16 ವಿಕೆಟ್ಗಳನ್ನು ಪಡೆದಿದ್ದರು.