ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಆರಂಭಿಕ ಹಾಗೂ ತಂಡದ ಉಪನಾಯಕ ಕೆಎಲ್ ರಾಹುಲ್ ಅಜೇಯ 51 ರನ್ ಗಳಿಸಿದ್ದಾರೆ. ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಬಲದಿಂದ ಭಾರತ ತಂಡ ಮೊದಲ ಪಂದ್ಯವನ್ನು 8 ವಿಕೆಟ್ಗಳಿಂದ ಗೆಲ್ಲಲು ಸಾಧ್ಯವಾಯಿತು. ತನ್ನ ಇನ್ನಿಂಗ್ಸ್ ಸಮಯದಲ್ಲಿ, ರಾಹುಲ್ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ಎವರ್ ಗ್ರೀನ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮಾಡದ ದಾಖಲೆಯನ್ನು ಮಾಡಿದ್ದಾರೆ.
ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಲ್ಲಿ ಕೆಎಲ್ ರಾಹುಲ್ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 3694 ರನ್ ಗಳಿಸಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅವರ ನಂತರ ವಿರಾಟ್ ಕೊಹ್ಲಿ 3663 ರನ್ ಗಳಿಸಿದ್ದಾರೆ. ಅತಿ ಹೆಚ್ಚು ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಮಾಡುವಲ್ಲಿ ರೋಹಿತ್ ಮತ್ತು ಕೊಹ್ಲಿ ಕ್ರಮವಾಗಿ ನಂಬರ್ ಒನ್ ಮತ್ತು ಎರಡನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ರಾಹುಲ್ 16ನೇ ಸ್ಥಾನದಲ್ಲಿದ್ದಾರೆ.