ಧೋನಿ ಅವರು ನಿರ್ಧಾರ ತೆಗೆದುಕೊಂಡಾಗ ಅದನ್ನು ಬದಲಾಯಿಸುವುದಿಲ್ಲ. 100 ಟೆಸ್ಟ್‌ಗಳ ಬಳಿಕ ಅವರು ಟೆಸ್ಟ್ ಕ್ರಿಕೆಟ್ ತೊರೆದರು ಮತ್ತು ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಆದರೆ, ದಿಢೀರ್ ನಿವೃತ್ತಿ ಪಡೆದು ಹೊಸಬರಿಗೆ ಅವಕಾಶ ನೀಡಿದರು. 2014ರ ಡಿಸೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ಧೋನಿ 3 ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.