ಒಂದೊಂದೇ ಹೆಜ್ಜೆ ಮುಂದಿಟ್ಟು ಸಾಧನೆ: ನೀರಜ್ ಜಾವೆಲಿನ್ ಥ್ರೋ ಕ್ರೀಡೆಯನ್ನು ಗಂಭೀರವಾಗಿ ಪರಿಗಣಿಸಿ ಅದರಲ್ಲಿ ಒಂದೊಂದೇ ಹೆಜ್ಜೆ ಮುನ್ನಡೆದರು. 2013ರಲ್ಲಿ ಉಕ್ರೇನ್‌ನಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಿದರೂ ಪದಕ ಸಿಗಲಿಲ್ಲ. 2014ರಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಕಿರಿಯರ ಒಲಿಂಪಿಕ್ಸ್ ಅರ್ಹತಾ ಟೂರ್ನಿಯಲ್ಲಿ ಬೆಳ್ಳಿ ಜಯಿಸಿದರು.
ಟೋಕಿಯೋ ಒಲಿಂಪಿಕ್ ನಲ್ಲಿ ಚಿನ್ನದ ಪದಕ: ಪುರುಷರ ಜಾವೆಲಿನ್ ಥ್ರೋ ಫೈನಲ್ ಸುತ್ತಿನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆಯುವ ಟೋಕಿಯೋ ಒಲಿಂಪಿಕ್ ನಲ್ಲಿ ಚಿನ್ನದ ಪದಕವನ್ನು ನೀರಜ್ ಚೋಪ್ರಾ ಮುಡಿಗೇರಿಸಿಕೊಂಡಿದ್ದರು. ಈ ಮೂಲಕ ಬರೋಬ್ಬರಿ ಒಂದು 100 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದ ಟ್ರ್ಯಾಕ್ ಹಾಗೂ ಫೀಲ್ಡ್ ವಿಭಾಗದಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲಿಟ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ತೋಳಿಗೆ ಶಸ್ತ್ರ ಚಿಕಿತ್ಸೆ: 2019ರ ಮೇ ತಿಂಗಳಲ್ಲಿ ನೀರಜ್ ಚೋಪ್ರಾ ಥ್ರೋ ಮಾಡುವ ತೋಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಹಾಗಾಗಿ, ಐಎಎಎಫ್ ವಿಶ್ವ ಚಾಂಪಿಯನ್‌ಷಿಪ್ಸ್, ಡೈಮಂಡ್ ಲೀಗ್ ಹಾಗೂ ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ ಕಣಕ್ಕೆ ಇಳಿದಿರಲಿಲ್ಲ. 2019ರ ನ್ಯಾಷನಲ್ ಚಾಂಪಿಯನ್‌ಷಿಪ್‌ನಲ್ಲಿ ಕಣಕ್ಕೆ ಇಳಿಯಲು ನೀರಜ್ ನಿರೀಕ್ಷೆ ಮಾಡಿದ್ದರು. ಆದರೆ, ಅಥ್ಲೆಟಿಕ್ಸ್ ಫೆಡೆರೇಷನ್ ಆಫ್ ಇಂಡಿಯಾ ಅನುಮತಿ ನೀಡಿರಲಿಲ್ಲ.