PKL 8: ಫುಲ್ ಚಾರ್ಜ್ ಆಗಿ ಗುಮ್ಮೋಕೆ ರೆಡಿಯಾದ ಬೆಂಗಳೂರು ಬುಲ್ಸ್: ಹೊಸ ವರ್ಷಕ್ಕೆ ರಣರೋಚಕ ಫೈಟ್!
ಡಿಸೆಂಬರ್ 31ರ ಶುಕ್ರವಾರದವರೆಗೂ ಒಟ್ಟು 24 ಪಂದ್ಯಗಳು ನಡೆದಿದ್ದು, ಇಂದು ಅಂದರೆ ಜನವರಿ 1ರಂದು ಒಟ್ಟು ಮೂರು ಪಂದ್ಯಗಳು ನಡೆಯಲಿವೆ. ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ಯುಪಿ ಯೋಧಾ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತೆಲುಗು ಟೈಟಾನ್ಸ್ ತಂಡಗಳು ಸೆಣಸಾಟ ನಡೆಸಲಿವೆ
ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ.
2/ 6
ಡಿಸೆಂಬರ್ 31ರ ಶುಕ್ರವಾರದವರೆಗೂ ಒಟ್ಟು 24 ಪಂದ್ಯಗಳು ನಡೆದಿದ್ದು, ಇಂದು ಅಂದರೆ ಜನವರಿ 1ರಂದು ಒಟ್ಟು ಮೂರು ಪಂದ್ಯಗಳು ನಡೆಯಲಿವೆ. ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ಯುಪಿ ಯೋಧಾ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತೆಲುಗು ಟೈಟಾನ್ಸ್ ತಂಡಗಳು ಸೆಣಸಾಟ ನಡೆಸಲಿವೆ
3/ 6
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ತೆಲುಗು ಟೈಟಾನ್ಸ್ ಹೇಳಿಕೊಳ್ಳುವಂತಹ ಆರಂಭವನ್ನು ಪಡೆದುಕೊಳ್ಳುವಲ್ಲಿ ವಿಫಲವಾಗಿದೆ
4/ 6
ಆವೃತ್ತಿಯಲ್ಲಿ ಇದುವರೆಗೂ ಒಟ್ಟು 4 ಪಂದ್ಯಗಳನ್ನಾಡಿರುವ ಬೆಂಗಳೂರು ಬುಲ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದು ಮತ್ತೊಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
5/ 6
ಇನ್ನು ಪ್ರೊ ಕಬಡ್ಡಿ ಇತಿಹಾಸದಲ್ಲಿ ಈ ತಂಡಗಳ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ತೆಲುಗು ಟೈಟಾನ್ಸ್ ವಿರುದ್ಧ ಭರ್ಜರಿ ಮೇಲುಗೈ ಸಾಧಿಸಿದೆ.
6/ 6
ಈ ತಂಡಗಳ ನಡುವೆ ಇದುವರೆಗೂ ಒಟ್ಟು 17 ಪಂದ್ಯಗಳು ನಡೆದಿದ್ದು, ಬೆಂಗಳೂರು ಬುಲ್ಸ್ 11 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ತೆಲುಗು ಟೈಟಾನ್ಸ್ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 4 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.ಭೆನ