ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ 10000 ಹೆಚ್ಚು ರನ್ಗಳ ದಾಖಲೆ ಬರೆದಿರುವ ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 48 ಶತಕಗಳನ್ನು ಸಿಡಿಸಿದ್ದಾರೆ. ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ದ್ರಾವಿಡ್, ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ದಾಳಿಯನ್ನು ಎದುರಿಸಿದ ಖ್ಯಾತಿಗೂ ಪಾತ್ರವಾಗಿದ್ದಾರೆ.