ರಣಜಿ ಟ್ರೋಫಿಯಲ್ಲಿ ತ್ರಿಶತಕ, ವಿಜಯ್ ಹಜಾರೆ ಟ್ರೋಫಿಯಲ್ಲಿ ದ್ವಿಶತಕ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಶತಕ ಸಿಡಿಸಿದ ಏಕೈಕ ಕ್ರಿಕೆಟಿಗ ಎಂಬ ದಾಖಲೆಯನ್ನು ಪೃಥ್ವಿ ಶಾ ನಿರ್ಮಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 41 ಪಂದ್ಯಗಳಲ್ಲಿ 72 ಇನ್ನಿಂಗ್ಸ್ ಆಡಿರುವ ಶಾ 3623 ರನ್ ಗಳಿಸಿದ್ದಾರೆ. ಇದರಲ್ಲಿ 12 ಶತಕ ಹಾಗೂ 15 ಅರ್ಧ ಶತಕ ಸೇರಿವೆ.