ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ಸದ್ಯ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತ ತಂಡದ ಸ್ಟಾರ್ ಆಟಗಾ ಪಂತ್ ಯಾವಾಗ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ. ಆದರೆ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ದೃಷ್ಟಿಯಿಂದ ಭಾರತೀಯ ಕ್ರಿಕೆಟಿಗರು ಇದೀಗ ಅವರ ಉಪಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದಾರೆ.
ವಿಕೆಟ್ ಕೀಪರ್ ಬ್ಯಾಟರ್ ಆಗಿ ಅವರಿಗೆ ಈ ತಂಡದಲ್ಲಿ ಸ್ಥಾನ ನೀಡಲಾಗಿದೆ. 2022 ರ ಕೊನೆಯಲ್ಲಿ, ಅವರು ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದಾಗ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಸದ್ಯ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಗಾಯದಿಂದಾಗಿ ಅವರು ಮುಂದಿನ ತಿಂಗಳು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಗವಾಸ್ಕರ್ ಬಾರ್ಡರ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ.