2006ರ ಚಾಂಪಿಯನ್ಸ್ ಟ್ರೋಫಿಯ ಸಂದರ್ಭದಲ್ಲಿ ಯುವರಾಜ್ ಸಿಂಗ್ ಖೋ ಖೋ ಆಡುವಾಗ ಗಂಭೀರವಾಗಿ ಗಾಯಗೊಂಡಿದ್ದರು. ಆ ಸಂದರ್ಭದಲ್ಲಿ ಅವರ ಮೊಣಕಾಲು ಮುರಿದಿತ್ತು. ಆದರೆ ಶಸ್ತ್ರಚಿಕಿತ್ಸೆಯ ನಂತರ, ಅವರು ಟೀಂ ಇಂಡಿಯಾಕ್ಕೆ ಮರಳಿದರು. ಜೊತೆಗೆ ಭಾರತ ತಂಡ 2 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಪಂತ್ ವಿಷಯದಲ್ಲಿಯೂ ಇದೇ ಆಗಲಿ ಎಂದು ಫ್ಯಾನ್ಸ್ ಕೇಳಿಕೊಳ್ಳುತ್ತಿದ್ದಾರೆ.