ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಒಟ್ಟು 251 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರಲ್ಲಿ ಗೇಲ್ ಮತ್ತು ಡಿವಿಲಿಯರ್ಸ್ ನಂತರ ರೋಹಿತ್ ಮೂರನೇ ಸ್ಥಾನದಲ್ಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ 235 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 229 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿದ್ದಾರೆ. ಸಿಕ್ಸರ್ ವಿಚಾರದಲ್ಲಿ ರೋಹಿತ್ ನಂತರದ ಸ್ಥಾನದಲ್ಲಿ ಧೋನಿ ಮತ್ತು ಕೊಹ್ಲಿ ಇದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಸಿಕ್ಸರ್ ವಿಚಾರದಲ್ಲಿ ಮುಂದಿದ್ದಾರೆ.