WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

WTC Final 2023: ಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಕೆಲ ದಿನಗಳ ಹಿಂದೆ ಗಾಯಗೊಂಡಿದ್ದರು. ಇದರಿಂದಾಗಿ ಅವರು ಸಂಪೂರ್ಣ ಐಪಿಎಲ್ ಸೀಸನ್‌ನಿಂದ ಹೊರಗುಳಿದಿದ್ದರು.

First published:

  • 18

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ಭಾರತ ಕ್ರಿಕೆಟ್ ತಂಡ ಸತತ ಎರಡನೇ ಬಾರಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿ ನ್ಯೂಜಿಲೆಂಡ್ ವಿರುದ್ಧ ಭಾರತ ಫೈನಲ್‌ನಲ್ಲಿ ಸೋತಿತ್ತು. ಈ ಬಾರಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಮೊದಲ ಬಾರಿಗೆ ಈ ಟ್ರೋಫಿಯನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

    MORE
    GALLERIES

  • 28

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ರೋಹಿತ್ ಶರ್ಮಾ ನಾಯಕತ್ವದ ತಂಡ ಈ ಬಾರಿ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ಭಾರತ ತಂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಅತ್ಯುತ್ತಮ ಫಾರ್ಮ್‌ನಲ್ಲಿದ್ದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಇತ್ತೀಚಿನ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವಾಗ ಗಾಯಗೊಂಡಿದ್ದರು. ಆದರೆ ಇದೀಗ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

    MORE
    GALLERIES

  • 38

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಕೆಲ ದಿನಗಳ ಹಿಂದೆ ಗಾಯಗೊಂಡಿದ್ದರು. ಇದರಿಂದಾಗಿ ಅವರು ಸಂಪೂರ್ಣ ಐಪಿಎಲ್ ಸೀಸನ್‌ನಿಂದ ಹೊರಗುಳಿದಿದ್ದರು. ಶಸ್ತ್ರ ಚಿಕಿತ್ಸೆಗಾಗಿ ಬಿಸಿಸಿಐ ಕೆಲ ದಿನಗಳ ಹಿಂದೆ ಇಂಗ್ಲೆಂಡ್‌ಗೆ ಕಳುಹಿಸಿತ್ತು.

    MORE
    GALLERIES

  • 48

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ಅಯ್ಯರ್ ಅವರ ಶಸ್ತ್ರಚಿಕಿತ್ಸೆ ಮುಗಿದಿದ್ದು ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ವರದಿ ಪ್ರಕಾರ, ಶ್ರೇಯಸ್ ಅಯ್ಯರ್ ಅವರ ಬೆನ್ನಿನ ಶಸ್ತ್ರಚಿಕಿತ್ಸೆ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಮಂಗಳವಾರ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅದು ಯಶಸ್ವಿಯಾಗಿದೆ.

    MORE
    GALLERIES

  • 58

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ಶ್ರೇಯಸ್ ಅಯ್ಯರ್ ಅವರ ಶಸ್ತ್ರಚಿಕಿತ್ಸೆ ಸಂಪೂರ್ಣವಾಗಿ ಯಶಸ್ವಿಯಾಗಿದ್ದರೂ ಅವರು ಸಂಪೂರ್ಣ ಐಪಿಎಲ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿಯಲಿದ್ದಾರೆ.

    MORE
    GALLERIES

  • 68

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ಸುಮಾರು 3 ತಿಂಗಳ ಕಾಲ ಕ್ರಿಕೆಟ್ ಕ್ಷೇತ್ರದಿಂದ ದೂರ ಉಳಿಯಲಿದ್ದಾರೆ. ಏಕದಿನ ಕ್ರಿಕೆಟ್ ವಿಶ್ವಕಪ್ ಗೂ ಮುನ್ನ ಅವರು ಫಿಟ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಹಿನ್ನಡೆಯಾಗಬಹುದು.

    MORE
    GALLERIES

  • 78

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ಏಕೆಂದರೆ ಭಾರತದ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಬರುತ್ತಾರೆ. ಅವರು ಟೆಸ್ಟ್‌ನಲ್ಲಿ ಉತ್ತಮ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಇದುವರೆಗೆ ಅವರು 10 ಟೆಸ್ಟ್ ಪಂದ್ಯಗಳಲ್ಲಿ 666 ರನ್ ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ 105 ಆಗಿದೆ.

    MORE
    GALLERIES

  • 88

    WTC Final 2023: ಐಪಿಎಲ್​ ನಡುವೆ ಟೀಂ ಇಂಡಿಯಾಗೆ ಬ್ಯಾಡ್​ ನ್ಯೂಸ್​, ಟೆಸ್ಟ್​ ಚಾಂಪಿಯನ್​ಶಿಪ್​ನಿಂದ ಸ್ಟಾರ್​ ಪ್ಲೇಯರ್​ ಔಟ್​!

    ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಶ್ರೇಯಸ್ ಅಯ್ಯರ್ ಬದಲಿಗೆ ಯಾವ ಆಟಗಾರನನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದೆ. ಹನುಮ ವಿಹಾರಿ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    MORE
    GALLERIES