ಇದು ಅಂತಾರಾಷ್ಟ್ರೀಯ ಟಿ20ಯಲ್ಲಿ ಗಿಲ್ ಅವರ ಮೊದಲ ಶತಕವಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಬಾರಿಸಿದ್ದಾರೆ. ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಭಾರತ 234 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ ತಂಡ ಕೇವಲ 66 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರತ 168 ರನ್‌ಗಳ ಭರ್ಜರಿ ಜಯ ಸಾಧಿಸಿತು.