ಸಚಿನ್ ತಮ್ಮ 24 ವರ್ಷಗಳ ವೃತ್ತಿಜೀವನವನ್ನು 2013ರಲ್ಲಿ ಕೊನೆಗೊಳಿಸಿದರು. 16ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಚಿನ್ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಈ ಪಂದ್ಯ ವೆಸ್ಟ್ ಇಂಡೀಸ್ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ ಸಚಿನ್ 74 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ 126 ರನ್ ಗಳ ಜಯ ಸಾಧಿಸಿತ್ತು.