ಇಂಗ್ಲೆಂಡ್‌ನ ವಿಲ್ ಜಾಕ್ಸ್ ಟಿ20ಯಲ್ಲಿ 158 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಅವರು 102 ಇನ್ನಿಂಗ್ಸ್‌ಗಳಲ್ಲಿ 2800 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ. ಮತ್ತೊಂದೆಡೆ, ನ್ಯೂಜಿಲೆಂಡ್‌ನ ಕೊಲಿಮ್ ಡಿ ಗ್ರ್ಯಾಂಡ್ ಹೋಮ್ 221 ಇನ್ನಿಂಗ್ಸ್‌ಗಳಲ್ಲಿ 4 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಸ್ಟ್ರೈಕ್ ರೇಟ್ 157 ಆಗಿದೆ.
ಶ್ರೀಲಂಕಾದ ಸಿಕುಗೆ ಪ್ರಸನ್ನ ಕೂಡ ಹಿಂದೆ ಬಿದ್ದಿಲ್ಲ. ಅವರು 157 ಇನ್ನಿಂಗ್ಸ್‌ಗಳಲ್ಲಿ 155 ಸ್ಟ್ರೈಕ್ ರೇಟ್‌ನಲ್ಲಿ 2 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 150ಕ್ಕೂ ಹೆಚ್ಚು ಸಿಕ್ಸರ್‌ಗಳನ್ನೂ ಬಾರಿಸಿದ್ದಾರೆ. ಇದಲ್ಲದೆ, ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ 279 ಟಿ20 ಇನ್ನಿಂಗ್ಸ್‌ಗಳಲ್ಲಿ ಸುಮಾರು 4400 ರನ್ ಗಳಿಸಿದ್ದಾರೆ. ಸ್ಟ್ರೈಕ್ ರೇಟ್ 154 ಆಗಿದೆ. ಅವರು 252 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.