ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ಗೆ ಶಾರ್ದೂಲ್ 2017ರಲ್ಲಿ ಶ್ರೀಲಂಕಾ ವಿರುದ್ಧದ ಪಾದಾರ್ಪಣೆ ಮಾಡಿದ್ದರು. ಇನ್ನು, 2023ರ ಐಪಿಎಲ್ನಲ್ಲಿ ಶಾರ್ದೂಲ್ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ಮುಂದಿನ ವರ್ಷ ಟೀಂ ಇಂಡಿಯಾ ಆಟಗಾರ, ಕನ್ನಡಿಗ ಕೆಎಲ್ ರಾಹುಲ್ ಹಾಗೂ ಅತಿಯಾ ಶೆಟ್ಟಿ ವಿವಾಹ ನಡೆಯುತ್ತದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಸುದ್ದಿಯನ್ನು ಕೆಎಲ್ ರಾಹುಲ್ ಅಲ್ಲಗೆಳೆದಿದ್ದಾರೆ.