ಅಂತಾರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್ ಅವರು ಪಾತ್ರರಾಗಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ. 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. ಬೌಲಿಂಗ್ನಲ್ಲೂ 154 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್ನಲ್ಲಿ 200 ಪಂದ್ಯಗಳನ್ನಾಡಿದ್ದು, 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 68 ಅರ್ಧಶತಕ ಬಾರಿಸಿದ್ದಾರೆ.