ನವೆಂಬರ್ 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯ ಆಡಿದರು. ರೋಹಿತ್ ತಮ್ಮ ಮೊದಲ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಶತಕ (177) ಬಾರಿಸಿದ 14ನೇ ಭಾರತೀಯರಾದರು. 2ನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಅವರು ತಮ್ಮ ಚೊಚ್ಚಲ ಟೆಸ್ಟ್ ದ್ವಿಶತಕ (212) ಬಾರಿಸಿ ಸತತ ಟೆಸ್ಟ್‌ಗಳಲ್ಲಿ ಬ್ಯಾಕ್-ಟು-ಬ್ಯಾಕ್ ಶತಕಗಳನ್ನು ಗಳಿಸಿದ ಮೂರನೇ ಭಾರತೀಯ ಕ್ರಿಕೆಟಿಗರಾದರು.
ಟಿ-20ಯಲ್ಲಿ ರೋಹಿತ್‌ಗಿಂತ ಹೆಚ್ಚಿನ ಶತಕಗಳನ್ನು ಭಾರಿಸಿದ ಆಟಗರ, ಇವರು ಟಿ20 ಮಾದರಿಯಲ್ಲಿ 4 ಶತಕ ಸಿಡಿಸಿದ್ದಾರೆ. 2ನೇ ಸ್ಥಾನದಲ್ಲಿ ಸುರೇಶ್ ರೈನಾ ಇದ್ದಾರೆ. ನಾಯಕನಾಗಿ ಟಿ20ಯಲ್ಲಿ ಶತಕ ಬಾರಿಸಿದ ಏಕೈಕ ಭಾರತೀಯ ಕ್ರಿಕೆಟಿಗ ರೋಹಿತ್ ಶರ್ಮಾ. 2017 ರಲ್ಲಿ ಇಂದೋರ್‌ನಲ್ಲಿ ಶ್ರೀಲಂಕಾ ವಿರುದ್ಧ 61 ಎಸೆತಗಳಲ್ಲಿ 118 ರನ್ ಗಳಿಸಿದ ನಂತರ ಅವರು ಈ ಸಾಧನೆ ಮಾಡಿದರು.