ಫಿನ್‌ಲ್ಯಾಂಡ್‌ನಲ್ಲಿ ನಡೆದ ಫಿನ್‌ಲ್ಯಾಂಡ್ ಗೇಮ್ಸ್‌ನಲ್ಲಿ ಪಾವೊ ನೂರ್ಮಿ ಬೆಳ್ಳಿ ಗೆದ್ದಿದ್ದರು. 89.30 ಮೀಟರ್ ಎಸೆದ ನೀರಜ್ ತಮ್ಮದೇ ರಾಷ್ಟ್ರೀಯ ದಾಖಲೆ (87.58) ಮುರಿದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್ ದೂರ ಎಸೆದು ಚಿನ್ನ ಗೆದ್ದಿದ್ದರು. ಇದರೊಂದಿಗೆ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಭಾರತಕ್ಕೆ ಚಿನ್ನ ನೀಡಿದ ಮೊದಲ ಅಥ್ಲೀಟ್ ಎನಿಸಿಕೊಂಡರು.
2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದ್ದ ನಂತರ, ಭಾರತವು ನೀರಜ್ ಚೋಪ್ರಾ ರೂಪದಲ್ಲಿ ವೈಯಕ್ತಿಕ ವಿಭಾಗದಲ್ಲಿ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಇದಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಕಳೆದ ವರ್ಷ ಭಾರತ ಸರ್ಕಾರವು ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.
ಇನ್ನು, ನೀರಜ್ ಜೂನ್ 30ರಂದು ಡೈಮಂಡ್ ಲೀಗ್ನ ಸ್ಟಾಕ್ ಹೋಮ್ ಲೆಗ್ಗೆ ತೆರಳುವ ಮೋದಲು ಪಿನ್ಲ್ಯಾಂಡ್ ನಲ್ಲಿ ನಡೆಯುವ ಕುರ್ಟೇನ್ ಗೇಮ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ವೆಲ್ತ್ ಗೇಮ್ಸ್ ನ ಮೊದಲು ಓರೆಗಾನನ ನಲ್ಲಿನ ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್ ಶಿಫ್ ನಲ್ಲಿ ಪಾಲ್ಗೊಳಲಿದ್ದಾರೆ. ಇದು ಜುಲೈ 28ರಿಂದ ಆರಂಭವಾಗಲಿದೆ.