ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕ್ವಾಲಿಫೈಯರ್ 2 ಮತ್ತು ಅಂತಿಮ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಚೆಪಾಕ್ ಮೈದಾನದಲ್ಲಿ ಮಂಗಳವಾರ ನಡೆಯಲಿರುವ ಕ್ವಾಲಿಫೈಯರ್ 1ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ತಲುಪಲಿದೆ. ಸೋತ ತಂಡಗಳು ಶುಕ್ರವಾರ ನಡೆಯಲಿರುವ ಕ್ವಾಲಿಫೈಯರ್ 2ರಲ್ಲಿ ಆಡಲಿವೆ.