ಟಾಸ್ ಗೆದ್ದ ಪಾಕಿಸ್ತಾನ ಮಹಿಳಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು, 20 ಓವರ್ಗಳಲ್ಲಿ 4 ವಿಕೆಟ್ಗಳ ನಷ್ಟಕ್ಕೆ 149 ರನ್ ಗಳಿಸಿತ್ತು. ನಾಯಕಿ ಬಿಸ್ಮಾ ಮರೂಫ್ 55 ಎಸೆತಗಳಲ್ಲಿ 7 ಬೌಂಡರಿಗಳ ಸಹಿತ 68 ರನ್ ಹಾಗೂ ಆಯೇಶಾ ನಸೀಮ್ 25 ಎಸೆತಗಳಲ್ಲಿ ತಲಾ 2 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಿತ 43 ರನ್ಗಳಿಸಿ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾಗಿದ್ದರು.
ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ಜೆಮಿಮಾ ರೋಡ್ರಿಗಸ್ ಅಜೇಯ ಅರ್ಧಶತಕ ದಾಖಲಿಸಿ ಗೆಲುವಿನ ರೂವಾರಿಯಾದರು. ಜಮಿಮಾ 38 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇಯ 53ರನ್ಗಳಿಸಿದರೆ, ಇವರಿಗೆ ಸಾಥ್ ನೀಡಿದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ 20 ಎಸೆತಗಳಲ್ಲಿ 5 ಬೌಂಡರಿ ಸಹಿತ ಅಜೇಯ 31 ರನ್ಗಳಿಸಿ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ ಭಾರತವನ್ನು ಗೆಲುವಿನ ಗಡಿ ದಾಟಿಸಿದರು. ನಾಯಕಿ ಹರ್ಮನ್ ಪ್ರೀತ್ ಕೌರ್ 16 ರನ್ಗಳಿಸಿದರೆ, ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ 25 ಎಸೆತಗಳಲ್ಲಿ 33 ರನ್ಗಳಿಸಿದರು.