ಮುಂಬೈ ಇಂಡಿಯನ್ಸ್ ಲೀಗ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡ ಎಂಬ ಖ್ಯಾತಿಯನ್ನು ಹೊಂದಿದೆ. ವಾಸ್ತವವಾಗಿ, 2008 ರಲ್ಲಿ ಪುರುಷರ ಐಪಿಎಲ್ ಪ್ರಾರಂಭವಾದಾಗಿನಿಂದ, ಮುಂಬೈ ಬಹಳಷ್ಟು ನಿರೀಕ್ಷೆಗಳನ್ನು ಹೊಂದಿತ್ತು. ಚೆನ್ನೈ ಮತ್ತು ಕೋಲ್ಕತ್ತಾ ತಂಡಗಳೊಂದಿಗೆ ಮುಂಬೈ ಐಪಿಎಲ್ ಟ್ರೋಫಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಮೊದಲ ಐದು ಸೀಸನ್‌ಗಳಲ್ಲಿ ಮುಂಬೈಗೆ ಕಪ್ ಗೆಲ್ಲಲಾಗಲಿಲ್ಲ.
ಹರ್ಮನ್‌ಪ್ರೀತ್ ಕೌರ್ ಭಾರತ ಪರ ಹೆಚ್ಚು ಟಿ20 ಆಡಿದ ಅನುಭವ ಹೊಂದಿದ್ದಾರೆ. ಇಲ್ಲಿಯವರೆಗೆ ಅವರು 147 ಟಿ20 ಪಂದ್ಯಗಳನ್ನು ಆಡಿದ್ದಾರೆ. ಆಕೆಯ ನಾಯಕತ್ವದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಗೆದ್ದಿದೆ. ಭಾರತ ತಂಡದ ಇಬ್ಬರು ನಾಯಕರು ಇದೀಗ ಮುಂಬೈ ತಂಡದ ಪರ ಆಡುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.