ಅಹಮದಾಬಾದ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟೆಸ್ಟ್ ಪಂದ್ಯದವನ್ನು ಆಡುತ್ತಿದೆ. ಈ ಪಂದ್ಯವನ್ನು ಭಾರತ ತಂಡ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶಿಸಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸುವುದರೊಂದಿಗೆ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ.
ಇದಾದ ಬಳಿಕ ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಟೆಸ್ಟ್ ಸರಣಿಯ ನಿರ್ಧಾರವನ್ನು ಕಾದು ನೋಡಬೇಕಿದೆ. ಭಾರತ ತಂಡವು ಪ್ರಸ್ತುತ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಪಟ್ಟಿಯಲ್ಲಿ ಆಸ್ಟ್ರೇಲಿಯಾ ನಂತರ ಎರಡನೇ ಸ್ಥಾನದಲ್ಲಿದೆ. ಅದೇ ವೇಳೆ ಶ್ರೀಲಂಕಾ ತಂಡ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನದಲ್ಲಿದ್ದು ರೇಸ್‌ನಿಂದ ಹೊರಗುಳಿದಿದೆ.